ಜಿಲ್ಲೆ

ಹಾವೇರಿ ನಗರಸಭೆ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ಶಿಬಿರಕ್ಕೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಚಾಲನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರಕ್ಕೆ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಚಾಲನೆ ನೀಡಿದರು. ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದರು. ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಪೌರಾಯುಕ್ತ ಗಂಗಾಧರ ಬೆಲ್ಲದ, ಇತರರು ಪಾಲ್ಗೊಂಡಿದ್ದರು.