ಜಿಲ್ಲೆ

ಮೇ 20ರಂದು ಸಾರಿಗೆ ವ್ಯತ್ಯಯ

ಹಾವೇರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮೇ 20ರಂದು ರಾಜ್ಯ ಸರ್ಕಾರ ಆಯೋಜಿಸಿರುವ ವಿವಿಧ ಸವಲತ್ತುಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಹಾವೇರಿ ಜಿಲ್ಲಾ ವಿಭಾಗದಿಂದ ಒಟ್ಟು 140 ಬಸ್ ಸಂಚರಿಸಲಿವೆ.

ಪ್ರಾಸಂಗಿಕ ಕರಾರಿನ ಮೇಲೆ ಬಸ್ ಪೂರೈಸಲಾಗುತ್ತಿದೆ. ಜಿಲ್ಲೆಯಲ್ಲಿ ಬಸ್‌ಗಳ ಕೊರತೆಯಿಂದಾಗಿ ಮಾರ್ಗಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವುದರಿಂದ ಸಾರ್ವಜನಿಕ ಪ್ರಯಾಣಿಕರು, ವಿದ್ಯಾರ್ಥಿಗಳು ಸಹಕರಿಸುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.