ಜಿಲ್ಲೆ

ಚುನಾವಣೆ ಬಳಿಕ ರಾಜ್ಯ ಸರ್ಕಾರ ಮತ್ತಷ್ಟು ಗಟ್ಟಿ; ಸಚಿವ ಎಚ್.ಕೆ.ಪಾಟೀಲ ಭರವಸೆ

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತರಣ ಇದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನಗಳು ಕಾಂಗ್ರೆಸ್‌ಗೆ ಬರುತ್ತೇವೆ. ಕಾಂಗ್ರೆಸ್ ನೇತೃತ್ವದ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ. ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಮತ್ತಷ್ಟು ಗಟ್ಟಿಯಾಗುತ್ತದೆ ಎಂದು ಸಚಿವ ಎಚ್.ಕೆ.ಪಾಟೀಲ ಭರವಸೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆಲ್ಲಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ಏ.23ರಿಂದ ಉತ್ತರ ಕರ್ನಾಟಕದಲ್ಲಿ ಪ್ರಚಾರ ಮಾಡಲಿದ್ದಾರೆ. ಸಂಗಣ್ಣ ಕರಡಿ ಹಾಗೂ ಬೆಂಬಲಿಗರು ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು.
ಜನರು ಹಬ್ಬದ ಸಂತೆಯನ್ನು ಸಾಲ ಮಾಡಿ ಮಾಡುತ್ತಿದ್ದರು. ಈಗ ಗ್ಯಾರಂಟಿ ಯೋಜನೆಯ ಹಣದಲ್ಲಿ ಜನ ಹಬ್ಬದ ಸಂತೆ ಮಾಡುತ್ತಿದ್ದಾರೆ. ಈ ಮೂಲಕ ನಮ್ಮ ಸರ್ಕಾರ ಸ್ವಾವಲಂಬಿ ಬದುಕು ಕಟ್ಟಿಕೊಟ್ಟಿದೆ. ಮಹಿಳೆಯರ ಬಗ್ಗೆ ಎಚ್.ಡಿ.ಕುಮಾರ‌್ಸವಾಮಿ ಮಾಡಿರುವ ಆರೋಪಕ್ಕೆ ವಿಷಾದ ವ್ಯಕ್ತಪಡಿಸಿದರೆ ಸಾಲದು, ಮಹಿಳೆಯರ ಕಾಲಿಗೆ ಬಿದ್ದು ಕ್ಷಮೆ ಯಾಚಿಸಬೇಕು. ಇಲ್ಲವಾದರೆ ನಿಮ್ಮ ರಾಜಕೀಯ ಭವಿಷ್ಯ ಅಂತ್ಯಕ್ಕೆ ಬರಬಹುದು ಎಂದು ಎಚ್ಚರಿಕೆ ನೀಡಿದರು.