ಜಿಲ್ಲೆ

ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ರಾಜ್ಯ ಸರ್ಕಾರವು ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ ಪ್ರಸಕ್ತ 2023-24ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಿದೆ.
ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ ಪೂರ್ವ ಮುಂಗಾರು/ ಮುಂಗಾರು ರೈತರ ಬೆಳೆ ಸಮೀಕ್ಷೆ 2023-24 ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಆ್ಯಪ್ ಇನ್‌ಸ್ಟಾಲ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಬಹುದು. ಈ ಮಾಹಿತಿಯನ್ನು ಬೆಳೆವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು ಆರ್‌ಟಿಸಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸುವಂತೆ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.