ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶೋಷಿತರ ಅಭಿವೃದ್ಧಿ ಹರಿಕಾರ, ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆ.20ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಗುರುಭವನದಲ್ಲಿ ಜರುಗಲಿದೆ.
ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆ ಹೊರಡಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಸಂಸದ ಬಸವರಾಜ ಬೊಮ್ಮಾಯಿ ಉಪಸ್ಥಿತರಿರುವರು. ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಶಿಗ್ಗಾಂವಿ ಚನ್ನಪ್ಪ ಕನ್ನೂರ ಪದವಿಪೂರ್ವ ಕಾಲೇಜ್ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಉಪನ್ಯಾಸ ನೀಡುವರು.