ಜಿಲ್ಲೆ

ದಸರಾ ಕ್ರೀಡಾಕೂಟ ಸೆ.13ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲಾ ಪಂಚಾಯಿತಿ, ಹಾವೇರಿ ತಾಲೂಕು ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಹಾವೇರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.13ರಂದು ಬೆಳಗ್ಗೆ 10.30ಕ್ಕೆ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಒಲಂಪಿಕ್ ಧ್ವಜಾರೋಹಣ ನೆರವೇರಿಸುವರು. ಸಂಸದ ಶಿವಕುಮಾರ ಉದಾಸಿ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಲಿದ್ದಾರೆ.