ಜಿಲ್ಲೆ

ಅಂತಾರಾಷ್ಟ್ರೀಯ ಕ್ರೀಡಾಪಟು ಗಂಗವ್ವಗೆ ಸನ್ಮಾನ

ಹಾವೇರಿ: ಇಂಗ್ಲೆಂಡ್‌ನ ಬರ್ಮಿಂಗ್ ಹ್ಯಾಮ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಮಹಿಳಾ ಅಂಧರ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಚಿನ್ನದ ಪದಕ ಪಡೆದ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮದ ಗಂಗವ್ವ ನೀಲಪ್ಪ ಹರಿಜನ ಅವರನ್ನು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಇಂಗ್ಲೆಂಡ್ ವಿರುದ್ಧ ಲೀಗ್ ಪಂದ್ಯದಲ್ಲಿ ಗಂಗವ್ವ 60 ಬಾಲ್‌ಗಳಿಗೆ 117 ರನ್ ಗಳಿಸಿದ್ದಾರೆ. ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಶಾಲು ಹೊದಿಸಿ ಫಲ-ಪುಷ್ಪ ನೀಡಿ ಸನ್ಮಾನಿಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಲ್ಯಾಪ್‌ಟಾಪ್ ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲದರ್ತಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಕೆಂಪಳ್ಳೇರ ಉಪಸ್ಥಿತರಿದ್ದರು.