ಜಿಲ್ಲೆ

ಹಾವೇರಿ ಜಿಲ್ಲೆಯಲ್ಲಿ 11ರಿಂದ ಮದ್ಯ ಮಾರಾಟ ನಿಷೇಧ

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಂಗವಾಗಿ ನ.13ರಂದು ಮತದಾನ ನಡೆಯಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಹಾವೇರಿ ಜಿಲ್ಲಾ ವ್ಯಾಪ್ತಿಯಲ್ಲಿ ನ.11ರ ಸಂಜೆ 6 ಗಂಟೆಯಿಂದ ನ.14ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.

ಮತದಾನ ಮುಕ್ತಾಯಗೊಳ್ಳುವ 48 ಗಂಟೆಯ ಅವಧಿ ಪೂರ್ವದಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಹೊಂದಿಕೊಂಡಿರುವ ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ 5 ಕಿ.ಮೀ. ವ್ಯಾಪ್ತಿಯ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.