ಜಿಲ್ಲೆ

ಜಿಲ್ಲಾಡಳಿತದಿಂದ ಶ್ರೀ ಬಸವೇಶ್ವರ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಹಾವೇರಿ : ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶ್ರೀ ಬಸವೇಶ್ವರ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಶ್ರೀ ಬಸವೇಶ್ವರ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಅಪರ ತಹಸೀಲ್ದಾರ ಅಮೃತಗೌಡ ಪಾಟೀಲ, ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಸಿಬ್ಬಂದಿ, ಸಮುದಾಯದ ಮುಖಂಡರು ಭಾಗವಹಿಸಿದ್ದರು.