ಜಿಲ್ಲೆ

ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆ; ಬಿಎಸ್‌ಪಿ ಅಭ್ಯರ್ಥಿ ಸಣ್ಣ ಮೌಲಾಸಾಬ್ ಗಣಜೂರ ಉಮೇದುವಾರಿಕೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಹುಜನ ಸಮಾಜವಾದಿ ಪಕ್ಷದ(ಬಿಎಸ್‌ಪಿ) ಅಭ್ಯರ್ಥಿಯಾಗಿ ಸಣ್ಣ ಮೌಲಾಸಾಬ್ ಗಣಜೂರ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ರಘುನಂದನ ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ, ಇತರರು ಉಪಸ್ಥಿತರಿದ್ದರು.