ಜಿಲ್ಲೆ

ಮುಂದುವರಿದ ರೈತ ಸಂಘದ ಪ್ರತಿಭಟನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಸಮರ್ಪಕ ಬರ ಪರಿಹಾರ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಹಾವೇರಿಯ ಡಿಸಿ ಕಚೇರಿ ಎದುರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ಪ್ರತಿಭಟನಾಕಾರರು ಟೆಂಟ್ ಪಕ್ಕದಲ್ಲೇ ಅಡುಗೆ ಮಾಡಿ ಊಟ ಮಾಡಿದರು. ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಮಾಲತೇಶ ಪೂಜಾರ, ಗಂಗಣ್ಣ ಎಲಿ, ಭುವನೇಶ್ವರ ಶಿಡ್ಲಾಪೂರ, ಶಿವಬಸಪ್ಪ ಗೋವಿ, ಮಹಮ್ಮದ್ ಗೌಸ ಪಾಟೀಲ, ರುದ್ರಗೌಡ ಕಾಡನಗೌಡ್ರ, ದಿಳ್ಳೆಪ್ಪ ಮಣ್ಣೂರ, ಇತರರಿದ್ದರು.