ಹಾವೇರಿ: ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರಮದಾನದ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರು ಸ್ವತಃ ಪೊರಕೆ ಹಿಡಿದು ಸ್ವಚ್ಛತೆ ಮಾಡುವ ಮೂಲಕ ಶ್ರಮದಾನದಲ್ಲಿ ಭಾಗಿಯಾದರು.
ಜಿಲ್ಲಾಡಳಿತ ಭವನದ ಸಂಕೀರ್ಣದಲ್ಲಿರುವ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ ಶ್ರಮದಾನದಲ್ಲಿ ಭಾಗವಹಿಸಿ ಜಿಲ್ಲಾಡಳಿತ ಸಂಕೀರ್ಣ ಆವರಣದ ಸ್ವಚ್ಛಗೊಳಿಸಿದರು. ಜಿಲ್ಲಾಡಳಿತ ಸಂಕೀರ್ಣದ ಹೊರ ಆವರಣದಲ್ಲಿರುವ ವಿವಿಧ ಕಚೇರಿಗಳ ಮುಖ್ಯಸ್ಥರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ತಾಲೂಕಾ ಕೇಂದ್ರಗಳಲ್ಲೂ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಮೂರು ದಿನಗಳ ಶ್ರಮದಾನ ಕಾರ್ಯಕ್ರಮದ ಕುರಿತು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದರು.