ಜಿಲ್ಲೆ

ಅರಣ್ಯ ನಾಶ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ; ಡಿಸಿಎಫ್ ಅಬ್ದುಲ್ ಶೇಖ್‌ಗೆ ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಶಿಗ್ಗಾಂವಿ ತಾಲೂಕಿನ ದುಂಡಶಿ ಅರಣ್ಯ ಪ್ರದೇಶ ಹಳವ ತರ್ಲಘಟ್ಟ ಹಾಗೂ ಹಾವೇರಿ ತಾಲೂಕಿನ ಹಾವನೂರ ಬಳಿ ಅರಣ್ಯ ಪ್ರದೇಶ ನಾಶ ಮಾಡಿ, ಒತ್ತುವರಿಗೆ ಯತ್ನಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.

ಡಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅರಣ್ಯ ನಾಶದ ಕುರಿತು ‘ವಿಜಯವಾಣಿ’ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಅರಣ್ಯ ನಾಶಪಡಿಸಿದವರು ಹಾಗೂ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ಕರ್ತವ್ಯಲೋಪದ ಕುರಿತು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಜರುಗಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಶೇಖ್ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿ ತಿಳಿಸಿದರು.