ಜಿಲ್ಲೆ

ಜುಲೈ ಪಡಿತರ ಆಹಾರ ಧಾನ್ಯ ಬಿಡುಗಡೆ; ಅಕ್ಕಿ ಜತೆಗೆ ಜೋಳವೂ ಸೇರ್ಪಡೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲೆಯ ಅಂತ್ಯೋದಯ ಅನ್ನ ಪಡಿತರ ಚೀಟಿ, ಪಿಎಚ್‌ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಜುಲೈ-2024ರ ಪಡಿತರ ಆಹಾರಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಅಂತ್ಯೋದಯ ಪಡಿತರ ಚೀಟಿ ಹೊಂದಿದ ಪ್ರತಿ ಪಡಿತರ ಚೀಟಿಗೆ ಉಚಿತವಾಗಿ 35 ಕೆ.ಜಿ ಆಹಾರ ಧಾನ್ಯಗಳಲ್ಲಿ 14 ಕೆ.ಜಿ ಜೋಳ ಹಾಗೂ 21 ಕೆಜಿ ಅಕ್ಕಿ ಬಿಡುಗಡೆ ಮಾಡಲಾಗಿದೆ. ಪಿಎಚ್‌ಎಚ್(ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಎನ್‌ಎಫ್‌ಎಸ್‌ಎ ಯೋಜನೆಯಡಿ ಉಚಿತವಾಗಿ 3 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ 2 ಕೆ.ಜಿ ಜೋಳ ವಿತರಿಸಲಾಗುವುದು.
ಅಂತಾರಾಜ್ಯ/ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನಾಯಬೆಲೆ ಅಂಗಡಿಯಲ್ಲಿ ಪಡಿತರ ವಸ್ತುಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.
ಜುಲೈನಲ್ಲಿ ನ್ಯಾಯಬೆಲೆ ಅಂಗಡಿಕಾರರು, ಸರ್ಕಾರ ನಿಗದಿಪಡಿಸಿದ ಸಮಯದಲ್ಲಿ ನ್ಯಾಯಬೆಲೆ ಅಂಗಡಿಯನ್ನು ತೆರೆದು ಪಡಿತರ ವಸ್ತುಗಳನ್ನು ವಿತರಿಸುತ್ತಾರೆ. ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು ಮೇಲಿನಂತೆ ಪಡಿತರ ಆಹಾರಧಾನ್ಯವನ್ನು ಪಡೆಯಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.