ಜಿಲ್ಲೆ

ರಟ್ಟಿಹಳ್ಳಿ ಪ.ಪಂ. ಚುನಾವಣೆ, ವಿವಿಧ ಅಧಿಕಾರಿಗಳ ನೇಮಕ

ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿಯುತ ಚುನಾವಣೆ ನಡೆಸಲು ವಿವಿಧ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.

ಅಭ್ಯರ್ಥಿಗಳ ಚುನಾವಣಾ ವೆಚ್ಚ ಪರಿಶೀಲನೆಗೆ ನೋಡಲ್ ಅಧಿಕಾರಿಗಳಾಗಿ ಹಿರೇಕೆರೂರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮ್ಯಾನೇಜರ್ ಎಸ್.ಎಸ್.ರಾಜನಾಳ (ಮೊ.9480920769) ನೇಮಿಸಲಾಗಿದೆ. ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳ ಮೇಲುಸ್ತುವಾರಿಗಾಗಿ ನೋಡಲ್ ಅಧಿಕಾರಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಮೇಶ ಎಂ.ಎಸ್. ಅವರನ್ನು ನಿಯೋಜಿಸಲಾಗಿದೆ. ಮಾದರಿ ನೀತಿಸಂಹಿತೆ ಅನುಷ್ಠಾನಗೊಳಿಸಲು ಮಾದರಿ ನೀತಿಸಂಹಿತೆ ತಂಡ ರಚಿಸಲಾಗಿದೆ. ರಟ್ಟಿಹಳ್ಳಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ ಎನ್ (9986578657), ಪ.ಪಂ. ಮುಖ್ಯಾಧಿಕಾರಿ ಸಂತೋಷ ಚಂದ್ರಕೇರಿ (ಮೊ.9742778894) ಹಿರೇಕೆರೂರ ಅಬಕಾರಿ ವಲಯ ನಿರೀಕ್ಷಕರು, ಪೊಲೀಸ್ ಸಬ್ ಇನ್ಸಪೆಕ್ಟರ್ ಹಾಗೂ ವಿಡಿಯೋ ಗ್ರಾಫರ್‌ನ್ನು ನಿಯೋಜಿಸಲಾಗಿದೆ.

ಜಿಲ್ಲಾ ಮಟ್ಟದ ಮಾಧ್ಯಮ ಸಮಿತಿಗೆ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಎನ್.ಐಸಿ ಡಿಐಒ ಅಭಿಷೇಕಕುಮಾರ (8318010677), ಸದಸ್ಯರಾಗಿ ರಾಣೆಬೆನ್ನೂರ ಉಪ ವಿಭಾಗದ ಡಿವೈಎಸ್‌ಪಿ ಜೆ.ಲೋಕೇಶ (9480804521), ಕುಣಿಮೆಳ್ಳಿಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜ್ ಉಪನ್ಯಾಸಕ ಅರವಿಂದ ಐರಣಿ (9731636575), ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ ಎಚ್.ಎಸ್.ಪ್ರಕಾಶ (ಮೊ.99866882338) ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಭಾರತಿ ಎಚ್. (9480841238) ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.