ಜಿಲ್ಲೆ

ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಋತುಮಾನ ಕೇಂದ್ರ ನಡೆಸಲು ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಆರು ತಿಂಗಳ ಋತುಮಾನ ಕೇಂದ್ರಗಳನ್ನು ನಡೆಸಲು ಅರ್ಹ ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಸರ್ಕಾರೇತರ ಸಂಸ್ಥೆಗಳು ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಠಡಿ ಸಂಖ್ಯೆ 11 ಎ ಬ್ಲಾಕ್, 3ನೇ ಮಹಡಿ ಜಿಲ್ಲಾಡಳಿತ ಭವನ, ಹಾವೇರಿ ಈ ವಿಳಾಸದಲ್ಲಿ ಅರ್ಜಿ ಪಡೆಯಬಹುದು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸೆ.26ರ ಒಳಗಾಗಿ ಸಲ್ಲಿಸಬೇಕು ಎಂದು ಕರ್ನಾಟಕ ಸಮಗ್ರ ಶಿಕ್ಷಣ ಜಿಲ್ಲಾ ಯೋಜನಾಧಿಕಾರಿ ಹಾಗೂ ಪದನಿಮಿತ್ತ ಉಪನಿರ್ದೇಶಕರು ತಿಳಿಸಿದ್ದಾರೆ.