ಜಿಲ್ಲೆ

ಬಿಎಂ ಇಂಟರ್ ನ್ಯಾಶನಲ್ ಪಬ್ಲಿಕ್ ಶಾಲೆಯ ಸಂಸ್ಥಾಪಕರ ದಿನಾಚರಣೆ ಡಿ.10ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ತಾಲೂಕಿನ ದೇವಗಿರಿಯ ಪಿಬಿ ರಸ್ತೆಯಲ್ಲಿರುವ ಕನಕ ಲೋಕ ಶಿಕ್ಷಣ (ಕೆಎಲ್‌ಎಸ್) ಟ್ರಸ್ಟ್‌ನ ಬಿಎಂ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಡಿ.10ರಂದು ಬೆಳಗ್ಗೆ 11 ಗಂಟೆಗೆ ‘ಸಂಸ್ಥಾಪಕರ ದಿನಾಚರಣೆ’ ಹಮ್ಮಿಕೊಳ್ಳಲಾಗಿದೆ. ಕೆಎಲ್‌ಎಸ್ ಟ್ರಸ್ಟ್ ಸಂಸ್ಥಾಪಕರಾದ ಶ್ರೀಮತಿ ಬಸಮ್ಮ ಹಾಗೂ ಎಂ.ಮರಿಯಪ್ಪ ಅವರ ಪ್ರೇರಣೆಯಿಂದ ಪ್ರಾರಂಭವಾದ ಸಿಬಿಎಸ್‌ಸಿ ಪಠ್ಯಕ್ರಮ ಹೊಂದಿರುವ ಬಿಎಂಐಪಿ ಶಾಲೆ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥಾಪಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ನೆಗಳೂರ ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೆಎಲ್‌ಎಸ್ ಟ್ರಸ್ಟ್‌ನ ಚೇರ್ಮನ್ ಪ್ರೊ.ಎಂ.ನಾಗರಾಜ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಧರ್ಮದರ್ಶಿಗಳಾದ ನಿವೃತ್ತ ಐಪಿಎಸ್ ಅಧಿಕಾರಿ ಎಂ.ಆರ್.ಪೂಜಾರ, ಚಿಕ್ಕಯ್ಯ, ಸಿ.ಚನ್ನೇಗೌಡ, ಮತ್ತಿತರ ಗಣ್ಯರು ಪಾಲ್ಗೊಳ್ಳಿದ್ದಾರೆ ಎಂದು ಪ್ರಾಂಶುಪಾಲ ಗಣೇಶ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.