ಜಿಲ್ಲೆ

ವಿಶ್ವ ಹೆಪಟೈಟಿಸ್ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ

ಹಾವೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಹೆಪಟೈಟಿಸ್ ನಿಯಂತ್ರಣ ದಿನಾಚರಣೆ ಪ್ರಯುಕ್ತ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್.ಹಾವನೂರ ಚಾಲನೆ ನೀಡಿದರು.

ಜಿಲ್ಲಾ ವೈರಲ್ ಹೆಪಟೈಟಿಸ್ ನಿರ್ವಾಹಣ ಘಟಕದ ನೋಡಲ್ ಅಧಿಕಾರಿ ಡಾ.ನೀಲೇಶ ಎಂ.ಎನ್. ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಹೆಪಟೈಟಿಸ್-ಬಿ ಲಸಿಕಾ ಶಿಬಿರಗಳನ್ನು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಲಸಿಕೆ ಪಡೆಯಬೇಕು ಎಂದು ಸಲಹೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಎ.ಆರ್.ಟಿ ವೈದ್ಯಾಧಿಕಾರಿ ಡಾ.ಜಯಲಕ್ಷ್ಮೀ., ಡಾ.ಬಸವರಾಜ ತಳವಾರ, ವೈದ್ಯಾಧಿಕಾರಿಗಳು, ಜಿಲ್ಲಾ ಶುಶ್ರೂಷಕಿಯರ ತರಬೇತಿ ಕೇಂದ್ರದ ನರ್ಸಿಂಗ್ ಕಾಲೇಜ್ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಿಲ್ಲಾಸ್ಪತ್ರೆ ಆವರಣದಿಂದ ಹೊರಟ ಜಾಗೃತಿ ಜಾಥಾ ನಗರದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಸಾಗಿತು.