ಜಿಲ್ಲೆ

ತಂಬಾಕು ನಿಯಂತ್ರಣದಲ್ಲಿ ಪೊಲೀಸರ ಪಾತ್ರವೂ ಮುಖ್ಯ; ಡಿಎಚ್‌ಒ ಡಾ.ರಾಜೇಶ ಸುರಗಿಹಳ್ಳಿ

ಹಾವೇರಿ: ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಜತೆಗೆ ಪೊಲೀಸ್ ಇಲಾಖೆಯ ಸಹಕಾರ ಬಹಳ ಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಹೇಳಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಕೋಟ್ಪಾ ಕಾಯ್ದೆ-2003 ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಮತ್ತು ಚಿಕಿತ್ಸಾ ಸೌಲಭ್ಯಗಳ ಕುರಿತು ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಇತ್ತೀಚೆಗೆ ಜಿಲ್ಲೆಯ ಆಯ್ದ ಠಾಣೆಗಳ ಪಿಎಸ್‌ಐ ಹಾಗೂ ಎಎಸ್‌ಐಗಳಿಗೆ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ.ಸಂತೋಷ ದಡ್ಡಿ ಮತ್ತು ದಾದಾಪೀರ ಹುಲಿಕಟ್ಟಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಕಾರ್ಯಚಟುವಟಿಕೆ, ತಂಬಾಕು ಸೇವನೆಯ ದುಷ್ಪರಿಣಾಮ ಮತ್ತು ಕೋಟ್ಪಾ-2003ರ ಕಾಯ್ದೆ ಅನುಷ್ಠಾನದ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಜಗದೀಶ ಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಇತರರು ಉಪಸ್ಥಿತರಿದ್ದರು.