ಜಿಲ್ಲೆ

ಸ್ಕಾ ್ಯನಿಂಗ್ ಸೆಂಟರ್‌ಗಳಿಂದ ಕೋಟೆಷನ್ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ತಾಯಿ ಆರೋಗ್ಯ ಕಾರ್ಯಕ್ರಮದಡಿ ಅರ್ಹ ಗರ್ಭಿಣಿಯರ ಗರ್ಭಾವಸ್ಥೆಯ 20-22ನೇ ವಾರದ ಅವಧಿಯಲ್ಲಿ ಭ್ರೂಣದ ನ್ಯೂನ್ಯತೆಗಳನ್ನು ಪತ್ತೆ ಹಚ್ಚಲು ನೋಂದಾಯಿತ ಸ್ಕ್ಯಾನಿಂಗ್ ಸೆಂಟರ್‌ಗಳಿಂದ ಕೋಟೆಷನ್ ಆಹ್ವಾನಿಸಲಾಗಿದೆ.
ಬ್ಯಾಡಗಿ, ಹಾವೇರಿ, ಹಾನಗಲ್ಲ, ರಾಣೆಬೆನ್ನೂರ, ಸವಣೂರ ಮತ್ತು ಶಿಗ್ಗಾಂವಿ ತಾಲೂಕುಗಳಲ್ಲಿ ಸ್ಥಳೀಯವಾಗಿ ಮಾರ್ಗಸೂಚಿಗಳ ಪ್ರಕಾರ ಪ್ರತಿ ಸ್ಕ್ಯಾನಿಂಗ್‌ಗೆ 500 ರೂ. ಮೀರದಂತೆ ನೋಂದಾಯಿತ ಅರ್ಹ ಸ್ಕ್ಯಾನಿಂಗ್ ಸೆಂಟರ್‌ಗಳು ಮುಚ್ಚಿದ ಲಕೋಟೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಸೆ.30ರೊಳಗೆ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.