ಜಿಲ್ಲೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿಶಾಲ ಆರ್. ಜಿಲ್ಲಾ ಪ್ರವಾಸ

ಹಾವೇರಿ: ಜಿಲ್ಲಾ ಪಂಚಾಯಿತಿ ನೂತನ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿಶಾಲ ಆರ್. ಜು.4ರಿಂದ 7ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಸಭೆಗಳು ಹಾಗೂ ಕ್ಷೇತ್ರ ಭೇಟಿ ಮಾಡಲಿದ್ದಾರೆ.
ಜು.4ರಂದು ಬೆಳಗ್ಗೆ 11.30ರಿಂದ ಸಂಜೆ 5.30ರವರೆಗೆ ಕ್ಷೇತ್ರ ಭೇಟಿ ಮಾಡಲಿದ್ದಾರೆ. ಜು.5ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2 ಗಂಟೆವರೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 3ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ವಾಸ್ತವ್ಯ ಮಾಡಲಿದ್ದಾರೆ.
ಜು.6ರಂದು ಬೆಳಗ್ಗೆ 10ರಿಂದ 11.30ರವೆರೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 2.30ರಿಂದ 4.30ರವರೆಗೆ ಹಾವೇರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಹಾವೇರಿಯ ವೈದ್ಯಕೀಯ ಮಹಾವಿದ್ಯಾಲಯದ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಜು.7ರಂದು ಕ್ಷೇತ್ರದ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.