ಜಿಲ್ಲೆ

ಬೀದಿನಾಟಕ ಪ್ರದರ್ಶನಕ್ಕೆ ಅರ್ಜಿ ಆಹ್ವಾನ

ಹಾವೇರಿ: ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986ರ ಕುರಿತು ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಂ ಎಸ್.ಸಿ ಮತ್ತು ಎಸ್.ಟಿ ಕಾಲನಿಗಳಲ್ಲಿ ಬೀದಿನಾಟಕದ ಮೂಲಕ ಜಾಗೃತಿ ಮೂಡಿಸಲು ಅರ್ಹ ಕಲಾತಂಡ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಮಕ್ಕಳ ದುಡಿಮೆ ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧಿ ಮತ್ತು ನಿಯಂತ್ರಣ) ಕಾಯ್ದೆ -1986ರನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಯನ್ವಯ ಎಲ್ಲ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂರ್ಪೂವಾಗಿ ನಿಷೇಧಿಸಿದೆ ಹಾಗೂ 14 ರಿಂದ 18 ವರ್ಷದೊಳಗಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಿದೆ.

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಫೆ.10ರೊಳಗೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೋಸೈಟಿ ಕಾರ್ಮಿಕ ಇಲಾಖೆ ಕೊಠಡಿ ಸಂಖ್ಯೆ-28, ಬಿ ಬ್ಲಾಕ್, 3ನೇ ಮಹಡಿ, ಜಿಲ್ಲಾಡಳಿತ ಭವನ ದೇವಗಿರಿ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.