ಹಾವೇರಿ: ಹಾವೇರಿ ಲೋಕಸಭಾ ಟಿಕೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಮಾ.15ರಂದು ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ರಾಣೆಬೆನ್ನೂರ ತಾಲೂಕು ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಬೈಕ್ ರ‌್ಯಾಲಿ ಹಾಗೂ ತಾಲೂಕು ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಿರುವ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಗಲಭೆ ನಡೆದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಬ್ಯಾಡಗಿ ತಾಲೂಕು ಬಿಜೆಪಿ ಕಾರ್ಯಾಲಯದಲ್ಲಿ ಸಭೆಗೆ ಹಾಜರಾಗಲಿದ್ದಾರೆ. ಸಂಜೆ 4 ಗಂಟೆಗೆ ಹಾವೇರಿಯ ಕಾಗಿನೆಲೆ ರಸ್ತೆಯ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.