ಜಿಲ್ಲೆ

ರೈತರ ಪ್ರತಿಭಟನೆ ಶಾಸಕರ ಸಂಧಾನ ವಿಫಲ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಶಾಸಕರಾದ ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ ಹಾಗೂ ಶ್ರೀನಿವಾಸ ಮಾನೆ ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸಲು ಯತ್ನಿಸಿದರು.

ಸರ್ಕಾರದ ಗಮನಕ್ಕೆ ತಂದು ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು. ಅದನ್ನು ನಿರಾಕರಿಸಿದ ರೈತರು, ಜಿಲ್ಲಾ ಉಸ್ತುವಾರಿ ಸಚಿವರೇ ಇಲ್ಲಿಗೆ ಬಂದು ಭರವಸೆ ನೀಡಲಿ ಎಂದು ಪಟ್ಟು ಹಿಡಿದರು. ಹಾಗಾಗಿ, ಶಾಸಕರ ಸಂಧಾನ ವಿಫಲವಾಯಿತು. ಈ ವೇಳೆ ಶಾಸಕರು ಸಚಿವರನ್ನು ಸಂಪರ್ಕಿಸಲು ಯತ್ನಿಸಿದರಾದರೂ ಸಂಪರ್ಕಕ್ಕೆ ಸಿಗಲಿಲ್ಲ ಎಂದು ರೈತ ಮುಖಂಡರು ತಿಳಿಸಿದರು.

ಡಿಸಿ ರಘುನಂದನ ಮೂರ್ತಿ, ಜಿಪಂ ಸಿಇಒ ಅಕ್ಷಯ ಶ್ರೀಧರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ, ಸಂಜೀವಕುಮಾರ ನೀರಲಗಿ, ರಾಮಣ್ಣ ಕೆಂಚಳ್ಳೇರ, ಇತರರಿದ್ದರು.