ಜಿಲ್ಲೆ

ರಾಜ್ಯ ಸರ್ಕಾರಿ ನಿವೃತ್ತ ನೌಕರರ ಉಚಿತ ಹೃದಯ ತಪಾಸಣಾ ಶಿಬಿರ ಜು.8ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆಯ ಎಸ್.ಎಸ್.ನಾರಾಯಣ ಸೂಪರ್ ಸ್ಪೆಶಾಲಿಟಿ ಸೆಂಟರ್ ಸಹಯೋಗದಲ್ಲಿ ಜು.8ರಂದು ಬೆಳಗ್ಗೆ 10.30ಕ್ಕೆ ಅಶ್ವಿನಿ ನಗರದ ಸಂಘದ ಕಾರ್ಯಾಲಯದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಶಾಸಕ ರುದ್ರಪ್ಪ ಲಮಾಣಿ ಉದ್ಘಾಟಿಸಲಿದ್ದು, ಹೃದ್ರೋಗ ತಜ್ಞ ಡಾ.ಗುರುರಾಜ ಬಿ., ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ನಿವೃತ್ತ ಸರ್ಕಾರಿ ನೌಕರರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಎಸ್.ಬಿ.ಅಣ್ಣಿಗೇರಿ ಮನವಿ ಮಾಡಿದ್ದಾರೆ.