ಜಿಲ್ಲೆ

ಕೃತಕ ಆಭರಣ ತಯಾರಿಕೆ ತರಬೇತಿ

Dharwad

ಹಾವೇರಿ: ದೇವಗಿರಿಯ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೆಟಿ)ಯಲ್ಲಿ 13 ದಿನಗಳ ಕೃತಕ ಆಭರಣ ತಯಾರಿಕೆ ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಬಗೆಯ ಸರಗಳು, ಚೈನ್, ಬಳೆಗಳು, ಪೆಂಡೆಂಟ್, ಬ್ರಾಸ್ಲೆಟ್, ಮಂಗಳಸೂತ್ರ, ಮದುವೆ ಸಮಾರಂಭಗಳ ಆಭರಣಗಳ ತರಬೇತಿ ನೀಡಲಾಗುವುದು. ತರಬೇತಿಗೆ ಜಿಲ್ಲೆಯ ಗ್ರಾಮೀಣ ಭಾಗದ ರೇಷನ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಅವಕಾಶವಿದೆ.
ಅಭ್ಯರ್ಥಿಯು 18ರಿಂದ 45 ವರ್ಷದೊಳಗಿರಬೇಕು. ಜಾತಿ ಮತ್ತು ಆದಾಯ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಬಿಪಿಎಲ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ತರಬೇಕು. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ. ಆಸಕ್ತರು ಏ.30ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಡಿಸಿ ಕಚೇರಿ ಕಟ್ಟಡದ ಹಿಂಭಾಗ, ದೇವಗಿರಿ, ಹಾವೇರಿ ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.