ಜಿಲ್ಲೆ

ಪತ್ರಿಭಾ ಪುರಸ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನ

ಹಾವೇರಿ: ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ 2025ರ ಎಸ್.ಎಸ್.ಎಲ್.ಸಿ. ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದೇ ಇಲಾಖೆಯಲ್ಲಿ ಶಾಶ್ವತ ಸರ್ಕಾರಿ ಉದ್ಯೋಗಿಯಾಗಿರಬೇಕು. ನಿಗಮಗಳು, ಮಂಡಳಿಗಳು, ಪ್ರಾಧಿಕಾರಗಳು, ವಿಶ್ವವಿದ್ಯಾಲಯಗಳು, ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಿದ್ಯಾರ್ಥಿಯ ಪಾಸ್‌ಪೋರ್ಟ್ ಛಾಯಾಚಿತ್ರ ಮತ್ತು ಪ್ರಮಾಣಿಕೃತ ಅಂಕಪಟ್ಟಿ, ಇಲಾಖೆಯ ಸೇವಾ ದೃಢೀಕರಣ ಪತ್ರ, ಜಿಲ್ಲಾ/ತಾಲೂಕು/ಯೋಜನಾ ಶಾಖೆಯ ಅಧ್ಯಕ್ಷರು/ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರದೊಂದಿಗೆ ಮೇ 31ರೊಳಗಾಗಿ httpsAsgeanews.blogspot.com ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾವೇರಿ ಶಾಖೆ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ತಿಳಿಸಿದ್ದಾರೆ.