ಜಿಲ್ಲೆ

ವಿವಿಧ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ರಾಣೆಬೆನ್ನೂರ ಹಾಗೂ ಸವಣೂರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜು.23ರಂದು ಉಪ ಚುನಾಚಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದ್ದು, ಈ ಕುರಿತ ವೇಳಾಪಟ್ಟಿ ಪ್ರಕಟಿಸಿದೆ.
ರಾಣೆಬೆನ್ನೂರ ತಾಲೂಕು ಅಂತರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಕಟ್ಟಿ ಹಾಗೂ ಬೇಲೂರ ಗ್ರಾ.ಪಂ. ವ್ಯಾಪ್ತಿಯ ಹೀಲದಹಳ್ಳಿ ಕ್ಷೇತ್ರದ ತಲಾ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ಜರುಗಲಿದೆ. ಸವಣೂರ ತಾಲೂಕಿನ ಚಿಲ್ಲೂರಬಡ್ನಿ ಗ್ರಾ.ಪಂ. ವ್ಯಾಪ್ತಿಯ ಚಿಲ್ಲೂರಬಡ್ನಿ ಕ್ಷೇತ್ರ, ಕುರುಬರಮಲ್ಲೂರ ಗ್ರಾ.ಪಂ. ವ್ಯಾಪ್ತಿಯ ಬರದೂರ ಹಾಗೂ ಹಿರೇಮಕರಳಿಹಳ್ಳಿ ಗ್ರಾ.ಪಂ.ನ ಹಿರೇಮರಳಿಹಳ್ಳಿ ಕ್ಷೇತ್ರದ ತಲಾ ಒಂದು ಸ್ಥಾನಕ್ಕೆ ಉಪ ಚುನಾವಣೆ ಜರುಗಲಿದೆ.
ಜು.12ರಂದು ಬುಧವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜು.13ರಂದು ನಾಮಪತ್ರಗಳ ಪರಿಶೀಲನೆ, ಜು.15ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಮತದಾನ ಅವಶ್ಯವಿದ್ದಲ್ಲಿ ಜು.23ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ನಡೆಸಲಾಗುವುದು. ಮರು ಮತದಾನ ಅವಶ್ಯವಿದ್ದಲ್ಲಿ ಜು.25ರಂದು ನಡೆಸಲಾಗುವುದು. ಮತಗಳ ಎಣಿಕೆ ಜು.26ರಂದು ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರ ಸ್ಥಳಗಳಲ್ಲಿ ನಡೆಯಲಿದೆ.
ಜಿಲ್ಲೆಯಲ್ಲಿ ಚುನಾವಣೆ ನಡೆಯುವ ಪಂಚಾಯಿತಿಗಳಿಗೆ ಚುನಾವಣಾಧಿಕಾರಿಗಳನ್ನು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಚುನಾವಣಾ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜು.6ರಿಂದ ಜು.26ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.