ಜಿಲ್ಲೆ

ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲೆಯ ನಾಲ್ಕು ತಾಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಾವೇರಿ ತಾಲೂಕು ದೇವಿಹೊಸೂರು, ಹಾನಗಲ್ಲ ತಾಲೂಕು ಉಪ್ಪುಣಸಿ, ಬ್ಯಾಡಗಿ ತಾಲೂಕು ತಡಸ ಹಾಗೂ ರಟ್ಟಿಹಳ್ಳಿ ತಾಲೂಕು ಇಂಗಳಗೊಂದಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್https//www.karnatakaone.gov.in/public/GramOne

FranchiseeTermskn ನಲ್ಲಿ ಏ.15ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.