ಜಿಲ್ಲೆ

ಗ್ರಾಮ ಒನ್ ಕೇಂದ್ರಕ್ಕೆ ಅರ್ಜಿ ಆಹ್ವಾನ

Haveri - Kariyappa Aralikatti

ಹಾವೇರಿ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಾವೇರಿ ತಾಲೂಕಿನ ನರೇಗಲ್, ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಹಾಗೂ ರಾಣೆಬೆನ್ನೂರ ತಾಲೂಕು ಗುಡ್ಡಾಪೂರ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್(https//www.karnatakaone.gov.in/public/GramOneFranchiseeTermskn) ಮೂಲಕ ಜು.15ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ತಿಳಿಸಿದ್ದಾರೆ.