ಜಿಲ್ಲೆ

ಜಿಟಿಟಿಸಿ, ಟೂಲ್‌ರೂಮ್ ಮಷಿನಿಸ್ಟ್ ತಾಂತ್ರಿಕ ವೃತ್ತಿ ತರಬೇತಿ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಕರ್ನಾಟಕ ಸರ್ಕಾರದ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಹತ್ತನೇ ತರಗತಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಯುವಕರಿಗೆ ಟೂಲ್‌ರೂಮ್ ಮಷಿನಿಸ್ಟ್ ತಾಂತ್ರಿಕ ವೃತ್ತಿ ತರಬೇತಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆ ಇರುತ್ತದೆ. ಒಂದೇ ಕೋರ್ಸಿನಲ್ಲಿ ಟರ್ನರ್, ಮಿಲ್ಲರ್, ಗ್ರೈಂಡರ್, ಸಿಎನ್‌ಸಿ, ಕ್ಯಾಡ್-ಕ್ಯಾಮ್ ಮತ್ತುಟೂಲ್ ಆಂಡ್‌ಡೈ ಮೇಕಿಂಗ್ ಟ್ರೇಡ್‌ಗಳಲ್ಲಿ ಆನ್ ದಿ ಜಾಬ್‌ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಆಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ ಹಾಗೂ ಉದ್ಯೋಗ ಕೌಶಲಗಳನ್ನು ಕಲಿಸಲಾಗುತ್ತದೆ. ಆಸಕ್ತರು ಮೇ 30ರೊಳಗಾಗಿ ಅರ್ಜಿ ಸಲ್ಲಿಸಬೇಕು. ತರಬೇತಿಗಳು ಜೂನ್ 2ರಿಂದ ಪ್ರಾರಂಭವಾಗಲಿವೆ. ಆಸಕ್ತರು ಜಿಟಿಟಿಸಿ, ಗೋಕುಲ ರಸ್ತೆ, ಹುಬ್ಬಳ್ಳಿ ಮತ್ತು ಜಿಟಿಟಿಸಿ, ಅಳಗವಾಡಿ ರಸ್ತೆ, ನರಗುಂದ ಇಲ್ಲಿಗೆ ಸಂರ್ಕಿಸಬಹುದು.