ಜಿಲ್ಲೆ

ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ನಗರಸಭೆ, ಆರೋಗ್ಯ, ಆಹಾರ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಸೋಮವಾರ ನಗರದ ವಿವಿಧ 15 ಅಂಗಡಿಗಳ ಮೇಲೆ ದಾಳಿ ನಡೆಸಿ 1,800 ರೂ. ದಂಡ ವಸೂಲಿ ಮಾಡಿದೆ.
ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ತಂಬಾಕು ಜಗಿದು ಉಗುಳುವವರ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಕಲಂ-4ರ ಮತ್ತು ಕಲಂ 6ರಡಿ 1,800 ರೂ. ದಂಡ ವಸೂಲಿ ಮಾಡಲಾಗಿದೆ.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಿರಿಯ ಆರೋಗ್ಯ ಸಹಾಯಕ ಕೃಷ್ಣಪ್ಪ ಕನ್ನೆಮ್ಮನವರ, ಮಹೇಶ ಕುಮ್ಮುರ, ಇತರರು ಇದ್ದರು.