ಜಿಲ್ಲೆ

ಹಾನಗಲ್ಲ ತಾಲೂಕು ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ವೇತನ ಹೆಚ್ಚಿಸಬೇಕು, ಗ್ರಾಚ್ಯುಟಿ ಬಿಡುಗಡೆ ಮಾಡಬೇಕು, ಗುಣಮಟ್ಟದ ಆಹಾರ ಸರಬರಾಜು ಮಾಡಬೇಕು ಎಂದು ಆಗ್ರಹಿಸಿ ಹಾನಗಲ್ಲ ತಾಲೂಕು ಅಂಗನವಾಡಿ ನೌಕರರ ಸಂಘದ ವತಿಯಿಂದ ಹಾವೇರಿ ತಾಲೂಕು ದೇವಗಿರಿಯ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಸಂಘದ ಅಧ್ಯಕ್ಷೆ ರಾಜೇಶ್ವರಿ ಪಾಟೀಲ, ಸಿದ್ದಮ್ಮ ಚೌಟ, ಸುನಿತಾ ದೊಡ್ಡಮನಿ, ಇತರರಿದ್ದರು.