ಹಾವೇರಿ: ಯುಗ ಪುರುಷ ಹಾನಗಲ್ಲ ಶ್ರೀ ಕುಮಾರ ಮಹಾಶಿವಯೋಗಿಯವರ 156ನೇ ಜಯಂತ್ಯುತ್ಸವದ ಅಂಗವಾಗಿ ಸೆ.11ರಂದು ಸಂಜೆ 4 ಗಂಟೆಗೆ ನಗರದ ವೀರಭದ್ರೇಶ್ವರ ದೇವಸ್ಥಾನದಿಂದ ಎಂಜಿ ರಸ್ತೆ ಮೂಲಕ ಹುಕ್ಕೇರಿ ಮಠದವರೆಗೆ ಶ್ರೀಗಳ ಭಾವಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಗೌರಿಮಠದ ಶಿವಯೋಗಿ ಸ್ವಾಮೀಜಿ, ಅಕ್ಕಿಆಲೂರಿನ ಶಿವಬಸವ ಸ್ವಾಮೀಜಿ, ಬಣ್ಣದ ಮಠದ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಕೂಡಲದ ಮಹೇಶ್ವರ ಸ್ವಾಮೀಜಿ, ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.