ಜಿಲ್ಲೆ

ವಿಕಲಚೇತನರಿಗೆ ಸಾಧನ-ಸಲಕರಣೆ ವಿತರಣೆ ಸೆ.22ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಭಾರತೀಯ ರೈಲ್ವೆ ಹಣಕಾಸು ನಿಗಮ, ಜಿಲ್ಲಾಡಳಿತ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮ ಸೆ.22ರಂದು ಬೆಳಗ್ಗೆ 11 ಗಂಟೆಗೆ ನಗರದ ರಜನಿ ಸಭಾಂಗಣದಲ್ಲಿ ಜರುಗಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಇತರರು ಭಾಗವಹಿಸುವರು.