ಜಿಲ್ಲೆ

ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಪ್ರಸಕ್ತ 2023-24ನೇ ಸಾಲಿಗೆ ಎಸ್.ಎಸ್.ಎಲ್.ಸಿ. ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿ ಶಿಕ್ಷಣ, ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ಶುಲ್ಕ ಮರುಪವಾತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. ನಂತರ ಸ್ನಾತಕೋತ್ತರ ಪದವಿವರೆಗೆ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳು ವಿಕಲತೆ ದೃಢೀಕರಿಸುವ ವೈದ್ಯಕೀಯ ಪ್ರಮಾಣಪತ್ರ, ಯುಡಿಐಡಿ ಕಾರ್ಡ್, ಹಿಂದಿನ ತರಗತಿಯಲ್ಲಿ ಉತ್ತೀರ್ಣ ಹೊಂದಿರುವ ಅಂಕಪಟ್ಟಿ, ವಿದ್ಯಾರ್ಥಿ ಬ್ಯಾಂಕ್ ಖಾತೆ ಝರಾಕ್ಸ್ ಪ್ರತಿ, ಜಾತಿ-ಆದಾಯ ಪ್ರಮಾಣಪತ್ರ ಮತ್ತು ವಿಕಲತೆ ದೃಢೀಕರಿಸುವ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ ಅಗತ್ಯ ಅರ್ಜಿ ನಮೂನೆಯೊಂದಿಗೆ ಸಂಬಂಧಿಸಿದ ಕಾಲೇಜಿನ ಮುಖ್ಯಸ್ಥರ ಶಿಫಾರಸ್ಸಿನೊಂದಿಗೆ ಸಲ್ಲಿಸಬೇಕು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತಿಳಿಸಿದೆ.