ಜಿಲ್ಲೆ

ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ ಹಾಗೂ ಸಲ್ಲಿಸಿರುವ ವಿಶೇಷ ಶಿಕ್ಷಕರಿಂದ 2024ನೇ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ದ್ವಿಪ್ರತಿ ಅರ್ಜಿಯನ್ನು ಅ.15ರೊಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾಧಿಕಾರಿಯವರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 4, ನೆಲಮಹಡಿ, ದೇವಗಿರಿ-ಹಾವೇರಿ ಈ ವಿಳಾಸದಲ್ಲಿ ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್ ತಿಳಿಸಿದ್ದಾರೆ.