ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿ ನಗರ, ಗ್ರಾಮೀಣ ಪ್ರದೇಶ, ಹಿರೇಕೆರೂರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಭರ್ಜರಿ ಮಳೆ ಸುರಿದಿದೆ. ಬೆಳಗ್ಗೆಯಿಂದ ಸಂಜೆವರೆಗೆ ಭಾರೀ ಬಿಸಿಲು ಕಾಣಿಸಿಕೊಂಡಿತ್ತು.
ಸಂಜೆಯಾಗುತ್ತಿದ್ದಂತೆ ಏಕಾಏಕಿ ಮೋಡ ಆವರಿಸಿಕೊಂಡು ಗಂಟೆಗೂ ಅಧಿಕ ಕಾಲ ಮಳೆ ಸುರಿದಿದೆ. ಬೇಸಿಗೆಯ ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ಜನತೆಗೆ ಮಳೆ ತಂಪೆರೆಯಿತು.