ಜಿಲ್ಲೆ

ಸೆ.26ರಂದು ಗುತ್ತಲ, ಹೊಸರಿತ್ತಿ, ನೀರಲಗಿ ವಿದ್ಯುತ್ ವ್ಯತ್ಯಯ

ಕೇಶವಮೂರ್ತಿ ಬೇಲೂರಪ್ಪನವರ

ಗುತ್ತಲ: ಗುತ್ತಲ 110 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ.26ರಂದು ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗಲಿದೆ.

ಗುತ್ತಲ, ಹೊಸರಿತ್ತಿ ಮತ್ತು ನೀರಲಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಫೀಡರ್ ವ್ಯಾಪ್ತಿಯ ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.