ಜಿಲ್ಲೆ

ಮೋಟೆಬೆನ್ನೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ; ಧಗಧಗನೆ ಉರಿದ ಸ್ಕಾರ್ಪಿಯೋ

ಹಾವೇರಿ/ ಬ್ಯಾಡಗಿ: ಬ್ಯಾಡಗಿ: ತಾಲೂಕಿನ ಮೋಟೆಬೆನ್ನೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿ ಧಗಧಗನೆ ಉರಿದಿದೆ.

ಮಹಾರಾಷ್ಟ್ರದಿಂದ ಬೆಂಗಳೂರು ಕಡೆಗೆ ಹೊರಟಿದ್ದ ಮಹೀಂದ್ರಾ ಸ್ಕಾರ್ಪಿಯೋ ಕಾರಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಗಮನಿಸಿದ ಚಾಲಕ ಹಾಗೂ ಪ್ರಯಾಣಿಕರು ಕಾರು ನಿಲ್ಲಿಸಿ, ಕೆಳಗೆ ಇಳಿದಿದ್ದಾರೆ‌. ನಂತರ ಬೆಂಕಿ ಕಾರಿನ ತುಂಬ ವ್ಯಾಪಿಸಿಕೊಂಡು ಧಗಧಗನೆ ಉರಿದಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ದೂರ ಪ್ರಯಾಣದ ವೇಳೆ ಒತ್ತಡ ಹೆಚ್ಚಾಗಿ ಇಂಜಿನ್ ನಲ್ಲಿ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ. ಬ್ಯಾಡಗಿ ಠಾಣೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.