ಜಿಲ್ಲೆ

ಹರೀಶ್ ಡಿ.ಕೆ.ಗೆ ಪಿಎಚ್‌ಡಿ ಪದವಿ

ಹಾವೇರಿ: ಹಿರೇಕೆರೂರ ತಾಲೂಕಿನ ಯತ್ತಿನಹಳ್ಳಿ ಎಂ.ಕೆ. ಗ್ರಾಮದ, ಶಿರಸಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಭಾಗದ ವಿಜ್ಞಾನಿ ಹಾಗೂ ಸಹಾಯಕ ಪ್ರಾಧ್ಯಾಪಕ ಹರೀಶ ಡಿ.ಕೆ. ಅವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ.

ನ್ಯಾನೋ ಗೊಬ್ಬರಗಳಿಗೆ ವಿಶೇಷ ಒತ್ತು ನೀಡುವ ಮೂಲಕ ಈರುಳ್ಳಿಯಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಗೌರವ ದೊರೆತಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ತೋಟಗಾರಿಕೆ ವಿಭಾಗದ ಪ್ರಾಧ್ಯಾಪಕ ಡಾ.ಎಸ್.ಜಿ ಅಂಗಡಿ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಕೊಂಡಿದ್ದರು.