ಜಿಲ್ಲೆ

ವಾಣಿಜ್ಯ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರಿಗೆ ಜನವರಿಯಲ್ಲಿ 16ರಿಂದ 10 ದಿನಗಳ ಉಚಿತ ತರಕಾರಿ ಬೆಳೆಗಳ ನರ್ಸರಿ ಮತ್ತು ಫೆಬ್ರವರಿಯಲ್ಲಿ ಮೂರರಿಂದ 13 ದಿನಗಳ ಉಚಿತ ವಾಣಿಜ್ಯ ತೋಟಗಾರಿಕೆ ತರಬೇತಿ ಆಯೋಜಿಸಿದೆ.

ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ತರಬೇತಿ ನೀಡಲಾಗುವುದು. 18ರಿಂದ 45 ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳೊಂದಿಗೆ ಜ.14ರೊಳಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.