ಹಾವೇರಿ: ಹೊಸರಿತ್ತಿ 33 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ.20ರಂದು ತುರ್ತು ನಿರ್ವಹಣಾ ಕಾಮಗಾರಿ ನಡೆಸಲಾಗುವುದು. ಹಾಗಾಗಿ, ಈ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಹೊಸರಿತ್ತಿ ಎನ್‌ಜೆ ವೈ ಮತ್ತು ರಾಮಪುರ ಎನ್‌ಜೆ ವೈ 11 ಕೆವಿ ಮಾರ್ಗಗಳ ವ್ಯಾಪ್ತಿಯಲ್ಲಿ ಬರುವ ಹೊಸರಿತ್ತಿ, ರಾಮಪುರ, ಹಳೇರಿತ್ತಿ, ಅಗಸನಮಟ್ಟಿ, ಯಲಗಚ್ಚ ಗ್ರಾಮಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.