ಜಿಲ್ಲೆ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶಕ್ಕೆ ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸ್‌ಗಳ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಪ.ಜಾ./ಪ.ಪಂ. ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ./ಪ.ಪಂ. ಹಾಗೂ ಪ್ರವರ್ಗ-1 ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗೆ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಒಂದು ಲಕ್ಷ ರೂ. ಒಳಗಿರಬೇಕು.
ಅರ್ಹ ವಿದ್ಯಾರ್ಥಿಗಳು ಜುಲೈ 15ರ ಒಳಗೆ ಠಿಠಿ://.ಚ್ಟ್ಞಠಿ.ಜಟ.ಜ್ಞಿ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮಾಹಿತಿಗಾಗಿ ಇಲಾಖೆಯ ಠಿಠಿ://ಡಿ.ಚ್ಟ.್ಞಜ್ಚಿ.ಜ್ಞಿ, ವೆಬ್‌ಸೈಟ್ ಹಾಗೂ ತಾಂತ್ರಿಕ ತೊಂದರೆಗಳಾದಲ್ಲಿ ಇ ಮೇಲ್ ್ಜ.ಛಿಛ್ಞ.ಡಿಃಜಞಜ್ಝಿ.್ಚಟಞ ಅಥವಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಅಥವಾ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ ಹಾವೇರಿ ಈ ವಿಳಾಸವನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.