ಜಿಲ್ಲೆ

3 ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ; ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಸಹಯೋಗದಲ್ಲಿ ಹಾವೇರಿ ನಗರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದಡಿ ಅಭಿವೃದ್ಧಿಪಡಿಸುತ್ತಿರುವ ವಿವಿಧ ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮ ಶನಿವಾರ ನಗರದಲ್ಲಿ ಜರುಗಿತು.
ಬಸವೇಶ್ವರ ನಗರದ ಸಿ ಬ್ಲಾಕ್‌ನ ಶಿಶುನಾಳ ಶರೀಫ ಉದ್ಯಾನವನ ಕಾಮಗಾರಿಗೆ, ಬಸವೇಶ್ವರ ನಗರದ ಬಿ ಬ್ಲಾಕ್‌ನ ಎಲ್‌ಐಸಿ ಕಾಲನಿ ಉದ್ಯಾನವನ ಕಾಮಗಾರಿಗೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಪಕ್ಕದ ಹಂಚಿನಹಾಳ ಲೇಔಟ್ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ ಚಾಲನೆ ನೀಡಿದರು.
ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ನಾಗರಾಜ ಎಲ್., ಕೆ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಎಂ.ಎಂ.ಮೈದೂರ, ನಗರಸಭೆ ಸದಸ್ಯರು, ಇತರರು ಉಪಸ್ಥಿತರಿದ್ದರು.