ಹಾವೇರಿ: ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸಚಿವ ಶಿವಾನಂದ ಪಾಟೀಲ ಸನ್ಮಾನಿಸಿದರು. ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ರುಚಿ ಬಿಂದಲ್, ಎಸ್‌ಪಿ ಯಶೋಧಾ ವಂಟಗೋಡಿ, ಶಶಿಕಲಾ ಮಾಳಗಿ, ಸಂಜೀವಕುಮಾರ ನೀರಲಗಿ, ಇತರರಿದ್ದರು.