ಜಿಲ್ಲೆ

ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಎರಡು ಜನ ಸದಸ್ಯರ ಆಯ್ಕೆಗೆ ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ ಪ್ರತಿ ಜಿಲ್ಲೆಯಲ್ಲಿ ಆರರಿಂದ 18 ವರ್ಷದೊಳಗಿನ ಮಕ್ಕಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುತ್ತಿದೆ. ಅರ್ಹ ವ್ಯಕ್ತಿಗಳು ತಾವು ಸೇವೆ ಸಲ್ಲಿಸಿದ ಸೂಕ್ತ ದಾಖಲೆಗಳೊಂದಿಗೆ ನವೆಂಬರ್ 2 ರೊಳಗಾಗಿ ಖುದ್ದಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಚೇರಿ, ಜಿಲ್ಲಾಡಳಿತ ಭವನ, ಎ ಬ್ಲಾಕ್, ಎರಡನೇ ಮಹಡಿ, ದೇವಗಿರಿ, ಹಾವೇರಿ, ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.