ಜಿಲ್ಲೆ

ಕಲಕೇರಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ

ಹಾನಗಲ್ಲ: ಹಾನಗಲ್ಲ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾನುವಾರ ಹನುಮನಮಟ್ಟಿಯ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಸಮಾರಂಭ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮಕ್ಕಳಿಗೆ ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವ ಮಹತ್ವ ಮತ್ತು ಅದರಿಂದ ದೊರೆಯುವ ಖನಿಜಾಂಶಗಳ ಬಗ್ಗೆ ವಿವರಣೆ ನೀಡಿದರು. ಸೇವಿಸದಿದ್ದರೆ ಆಗುವ ದುಷ್ಪರಿಣಾಮಗಳ ಕುರಿತು ವಿಶ್ಲೇಷಿಸಿದರು. ನಂತರ ಕೈತೋಟದ ಮಹತ್ವದ ಬಗ್ಗೆ ಹಾಗೂ ತರಕಾರಿಗಳಿಗೆ ಸಿಂಪರಣೆ ಮಾಡುವ ರಾಸಾಯನಿಕಗಳಿಂದಾಗುವ ಪರಿಣಾಮಗಳ ಕುರಿತು ವಿವರಿಸಿದರು.
ಪ್ರೊ.ಡಾ.ಪಿ.ಬಾಬು ಮಕ್ಕಳಿಗೆ ಯಾವ ರೀತಿ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಬೇಕು ಎಂದು ತಿಳಿಸಿದರು. ಬಳಿಕ ಬಸವೇಶ್ವರ ದೇಗುಲದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು.
ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಮಕ್ಕಳು, ಗ್ರಾಮಸ್ಥರು ಇದ್ದರು.