ಜಿಲ್ಲೆ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಹಾವೇರಿ: ಕನಕ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.90ರಷ್ಟು ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ಕುರುಬ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹರು ಅಂಕಪಟ್ಟಿ ಹಾಗೂ ಮೂಲ ದಾಖಲೆಗಳೊಂದಿಗೆ ಅ.15ರೊಳಗಾಗಿ ಅಂದಾನಪ್ಪ ಗಡ್ಡದ, ಮಾತೃಛಾಯಾ ನಿಲಯ, ನೇತಾಜಿ ನಗರ, ಬಿ ಬ್ಲಾೃಕ್, ಇಜಾರಿಲಕಮಾಪುರ, ಹಾವೇರಿ ಅಥವಾ ಮೌನೇಶ ಕರೆಮ್ಮನವರ, ಕೆಇಬಿ ರಸ್ತೆ, ಶಾಂತಿನಗರ, ಗುತ್ತಲ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
ಅ.26ರಂದು ಕೆಇಬಿ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಜರುಗಲಿದೆ ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.