ಜಿಲ್ಲೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗುರುತಿನ ಚೀಟಿ ನೀಡಲು ಕಲಾವಿದರಿಂದ ಅರ್ಜಿ ಆಹ್ವಾನ

ಹಾವೇರಿ: ಜಿಲ್ಲೆಯ ಅರ್ಹ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗುರುತಿನ ಚೀಟಿ ನೀಡಲು ಹಾಗೂ ನೈಜ ಕಲಾವಿದರ ಪಟ್ಟಿ ತಯಾರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಕಲಾವಿದರು ತಮ್ಮ ಹಾಗೂ ತಮ್ಮ ತಂಡದ ಎಲ್ಲ ಸಹ ಕಲಾವಿದರ ದಾಖಲೆಗಳ ಮಾಹಿತಿಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಜೂ.25ರೊಳಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾವೇರಿ ಕಚೇರಿಗೆ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.